Mon. Jan 17th, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಕಂದಲಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಪಾಂಡವ ನ್ಯೂಸ್, ರಾಣೇಬೆನ್ನೂರು: ಕೌಟುಂಬಿಕ ವಿಚಾರದಲ್ಲಿ ಜಗಳ ವಾಗಿದ್ದರ ಕಾರಣ ಹಾಡುಹಗಲಲ್ಲೇ ಪತಿ ಮಹಾಶಯ ಎನ್ನಿಸಿಕೊಂಡವನು ತನ್ನ ಪತ್ನಿ ಮೇಲೆ ಕಂದಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನೂ ಚಾಕುವಿನಿಂದ ಇರಿದುಕೊಂಡ ಘಟನೆ ಶನಿವಾರ ನಗರದ ಹಲಗೇರಿ ರಸ್ತೆಯ ಬಳಿ ಇರುವ ಗಣೇಶ ನಗರದಲ್ಲಿ ಸಂಭವಿಸಿದೆ.
ಮಾರಣಾಂತಿಕ ಹಲ್ಲೆಗೊಳಗಾದ ಮಹಿಳೆಯನ್ನು ಮಹದೇವಕ್ಕ ಮೈಲಪ್ಪ ತಂಬೂರಿ (33) ಎಂದು ಗುರುತಿಸಲಾಗಿದ್ದು, ಮಹಿಳಾ ಮಕ್ಕಳ ಅಭಿವೃದ್ಧಿ ಆಹಾರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಳು. ಗಾಯಾಳು ಮಹಿಳೆ ಎಂದಿನಂತೆ ಕೆಲಸಕ್ಕೆ ತೆರಳುತ್ತಿರುವಾಗ ಹಿಂದಿನಿಂದ ಬಂದ ಆಕೆಯ ಪತಿ ಮೈಲಪ್ಪ ತಂಬೂರಿ ಕಂದಲಿಯಿಂದ ಆಕೆಯ ತಲೆಗೆ ಬಲವಾಗಿ ಹೊಡೆದು ಪಶ್ಚಾತ್ತಾಪಗೊಂಡ ತಾನೂ ಸಹ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಘಟನೆಯಲ್ಲಿ ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಇಬ್ಬರನ್ನೂ ದಾವಣಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!