Sat. Jan 22nd, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭಿನ್ನಾಭಿಪ್ರಾಯ ಸ್ಟೋಟ:

1 min read

ಹಾವೇರಿ : ಮಾಜಿ ಸಚಿವ ಹಾಲಿ ಶಾಸಕರಾಗಿದ್ದ ಸಿ.ಎಂ.ಉದಾಸಿ‌ ನಿಧನದಿಂದ ತೆರವಾಗಿರು ಹಾನಗಲ್ಲ ವಿಧಾನಸಭಾ ಕ್ಷೇತ್ರಕ್ಕೆ ಸಧ್ಯದಲ್ಲಿ ಉಪ ಚುನಾವಣೆ ನಡೆಯಲಿದೆ. ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಪೈಟ್ ತಾರಕ್ಕಕ್ಕೆ ಏರಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಮನೋಹರ್ ಹಾಗೂ ಮಾನೆ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದು, ವರಿಷ್ಠರು ಮುಜುಗರಗೊಳ್ಳುವಂತೆ ಮಾಡಿದೆ.

ಹೌದು, ಗುರುವಾರ ಬಿಜೆಪಿ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಡೆಯುವ ಪ್ರತಿಭಟನೆಯ ಮುಂದಾಳತ್ವ ವಹಿಸಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಹಾನಗಲ್ಲನ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ವರಿಷ್ಠ ಸಲೀಂ ಅಹ್ಮದ್ ಅವರಿಗೆ ಮನವರಿಕೆ ಮಾಡಿಕೊಳ್ಳಲು ಮುಂದಾದ ಸಮಯದಲ್ಲಿ ಆರೋಪ-ಪ್ರತ್ಯಾರೋಪ ತಾರಕಕ್ಕೆ ಏರಿ ಕೈ ಕೈ ಮಿಲಾಯಿಸುವಂತಾಯಿತು.

ಪ್ರತಿಭಟನೆ ಮುಗಿಸಿ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ಹಾನಗಲ್ಲ ತಾಲೂಕಿನಲ್ಲಿ ನಡೆಯುವ ಉಪಚುನಾವಣೆಯ ಟಿಕೆಟ್ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಉಭಯ ನಾಯಕರಗಳ ಬೆಂಬಲಿಗರು ತಮ್ಮ ತಮ್ಮ ನಾಯಕರ ಬೆಂಬಲಿಸಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದರು. ಈ ವೇಳೆ ಮಹೋಹರ ತಹಶಿಲ್ದಾರರ ಬೆಂಬಗಲಿಗರು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಮಾನೆ ಬೆಂಬಲಿಗರು ಶ್ರೀನಿವಾಸ ‌ಮಾನೆ ಅವರು ಹಾನಗಲ್ಲನವರೆ, ಅವರು ಹೊರಗಿನ ನಾಯಕರಲ್ಲ ಅವರು ಹಾನಗಲ್ಲ ತಾಲೂಲಿನವರೇ. ಹಾಗಾಗಿ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದರು.

ಈ ವೇಳೆ ಮನೋಹರ ಬೆಂಬಲಿಗರು ಹಾನಗಲ್ಲನಲ್ಲಿ 40 ವರ್ಷಗಳಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವಿ. ಇಷ್ಟು ವರ್ಷಗಳ ಕಾಲ ಪಕ್ಷಕ್ಕಾಗಿ ಜೀವನ ತ್ಯಾಗ ಮಾಡಿದ್ದೇವಿ. ಮಾನೆಯವರು ಹಾಮಗಲ್ಲಗೆ ಬಂದ ಮೇಲೆ ಹಳ್ಳಿಗಳಲ್ಲಿ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.‌ ಇದರಿಂದ ಕೆರಳಿದ ಮಾನೆ ಬೆಂಬಲಿಗರು ಮಾನೆ ಅವರು ಪಕ್ಷ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಪಕ್ಷ ಒಡೆಯುತ್ತಿರುವರು ನೀವು ಎಂದಾಗ ಎರಡು ಕಡೆಯ ಕಾರ್ಯಕರ್ತರು ಕೈ ಕೈ ಮಿಲಾಯಿಸಿದರು.‌

ಈ ಸಮಯದಲ್ಲಿ ಮಧ್ಯ ಪ್ರವೇಶ ಮಾಡಿದ ಜಿಲ್ಲಾಮಟ್ಟದ ನಾಯಕರು ಎರಡು ಗುಂಪಿನ ಕಾರ್ಯಕರ್ತರನ್ನು ಹೊರ ಕಳುಹಿಸಿದರು. ಬಳಿಕ ಮಾನೆ ಬೆಂಬಗಲಿಗರು ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಸಭೆ ನಡೆಸಿದರು. ಮನೋಹರ ಬೆಂಬಗಲಿಗರು ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ಬಳಿಕ ಸಂಜೆ 5.ಗಂಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಮ್ಮುಖದಲ್ಲಿ ಉಭಯ ನಾಯಕರ ತಲಾ ಹತ್ತು- ಹತ್ತು ಜನರು ಅಭಿಪ್ರಾಯ ಸಂಗ್ರಹಿಸಿದರು.

ಚುನಾವಣೆ ಆಯೋಗ ಇನ್ನೂ ಚುನಾವಣೆ ಘೋಷಣೆ ಮಾಡಿಲ್ಲ. ಅದಾಗಲೇ ಕಾಂಗ್ರೆಸ್ ನಲ್ಲಿ ಟಿಕೆಟ್ ಪೈಟ್ ತಾರಕ್ಕಕ್ಕೆ ತಲುಪಿದ್ದು, ಇದು ಮುಂದಿನ ದಿನಗಳಲ್ಲಿ ಎಲ್ಲಿಗೆ ತಲುಪುತ್ತೋ ಕಾದು ನೋಡಬೇಕು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!