Sat. Jan 22nd, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ ಮಧ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಫೈಟ್ ಇಲ್ಲ: ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತೇ : ಸಲೀಂ ಅಹ್ಮದ್

ಹಾವೇರಿ: ಸಿ.ಎಲ್.ಪಿ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಅವರ ಮಧ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಟ್ ಇಲ್ಲಾ, ಅದು ಕೆಲವರ ಅಭಿಪ್ರಾಯ ಮಾತ್ರ. ಕಾಂಗ್ರೆಸ್ ನಲ್ಲಿ ಸಾಮೂಹಿಕ ನಾಯಕತ್ವ ಇದೇ ಎಂದು ಕರ್ನಾಟಕ ಪ್ರದೇಶ ಕಾಮಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ ಹೇಳಿದರು.

ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರ ಬೆಂಬಲಿಗ ಕೆಲವರು ಕೆಲ ಭಾವನೆ, ವಿಚಾರಗಳನ್ನ ಹೇಳಿರಬಹುದು. ಅದು ಈಗ ಅಪ್ರಸ್ತುತ. ಇವರಿಬ್ಬರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ. ನಮ್ಮ ನಾಯಕರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾವೆಲ್ಲರೂ ಕಾರ್ಯಕರ್ತರು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರುವ ಕೆಲಸವನ್ನ ಮಾಡ್ತೀವಿ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವ ಒಪ್ಪಿ ಬರುವವರು ಅರ್ಜಿ ಕೊಟ್ಟ ನಂತರ ಅಲ್ಲಂ ವೀರಭದ್ರಪ್ಪ ಸಮಿತಿ ನೇತೃತ್ವದಲ್ಲಿ ಚರ್ಚಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿದೇಶದಲ್ಲಿರುವ ಕಪ್ಪು ಹಣ ಪ್ರಧಾನಿ ಮೋದಿ ತರುತ್ತೇವೆ ಅಂದವರು ಇಂದಿನವರೆಗೂ ತರಲಿಲ್ಲ. ಪ್ರತಿಯೊಬ್ಬರ ಖಾತೆಗೆ 15. ಲಕ್ಷ ಹಾಕುತ್ತವಿ ಎಂದವರು ಇಂದಿನವರೆಗೆ ಹಾಕಲಿಲ್ಲ. ಹೀಗೆ ಪ್ರಧಾನಿ ಮೋದಿ ಸುಳ್ಳು ಹೇಳಿಕೊಳ್ಳಕೊಂಡ ಜನರಿಗೆ ಮೋಸ ಮಾಡಿದ್ದಾರೆ. ಪ್ರಪಂಚದಲ್ಲಿ ಸುಳ್ಳು ಹೇಳೋದ್ರಲ್ಲಿ ಆಸ್ಕರ್ ಅವಾರ್ಡ್ ಕೊಡೋದಾದ್ರೆ ಅದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಡಬೇಕು ಎಂದು ಲೇವಡಿ ಮಾಡಿದರು.

ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ 2. ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ, ಕಳೆದ ಏಳು ವರ್ಷಗಳಲ್ಲಿ 14. ಕೋಟಿ ಉದ್ಯೋಗ ಕಳೆದಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಯುವಕರ ಶಾಪ ತಟ್ಟುತ್ತದೆ. ಯುವಕರು ಕೆಲಸವಿಲ್ಲದೆ ಬೀದಿಯಲ್ಲಿ ಅಲೆಯುವ ಪರಿಸ್ಥಿತಿ ಬಂದಿದೆ, ಅಚ್ಛೆ ದಿನ್ ಆಯೇಗಾ ಎಂದು ಹೇಳಿದ್ದರು. ಆದರೆ ಪ್ರಸಕ್ತ ಸಬ್ಕೋ ಬುರಾದಿನ್ ಆಚುಕಿಹೈ ಎಂದರು.

ಚಾಮರಾಜನಗರ ನಗರದಲ್ಲಿ ಆಕ್ಸಿಜನ್ ಕೊಡದೆ ರಾಜ್ಯ ಸರಕಾರವೇ 36. ಜನರನ್ನ ಕೊಲೆ ಮಾಡಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಧ್ಯಕ್ಷ ಎಮ್.ಎಮ್.ಹಿರೇಮಠ, ಪ್ರಕಾಶ ಕೋಳಿವಾಡ, ಶಿವಯೋಗಿ ಹಿರೇಮಠ ಸೇರಿದಂತೆ ಮುಂತಾದವರು ಹಾಜರಿದ್ದರು‌.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!