Fri. Oct 15th, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

ನೆಹರು ಓಲೆಕಾರಗೆ ಕೈ ತಪ್ಪಿದ ಸಚಿವ ಸ್ಥಾನ: ಹಾವೇರಿಯಲ್ಲಿ ಭುಗಿಲ್ಲೆದ್ದ ಅಭಿಮಾನಿಗಳ ಆಕ್ರೋಶ

ಹಾವೇರಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಅವರ ಸಂಪುಟದಲ್ಲಿ ನೆಹರು ಓಲೆಕಾರ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ನೆಹರು ಓಲೆಕಾರ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ‌

ಬುಧವಾರ ನಗರದ ಪ್ರವಾಸಿ ಮಂದಿರದಿಂದ ಓಲೆಕಾರ ಅಭಿಮಾನಿಗಳು ಪ್ರತಿಭಟನೆ ಮೆರವಣಿಗೆ ಮೂಲಕ ಸಿದ್ದಪ್ಪ ವೃತ್ತಕ್ಕೆ ಆಗಮಿಸಿ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ಮಾಡಿದರು.

ನೂರಾರು ಜನ ಅಭಿಮಾನಿಗಳು ಮೆರವಣಿಗೆ ಉದ್ದಕ್ಕೂ ನೆಹರ ಓಲೆಕಾರ ಪರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿ ಘೋಷಣೆ ಕೂಗಿಕೊಂಡ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದರು.

ಈ ವೇಳೆ ಪ್ರತಿಭಟನಾಕಾರರು ನೆಹರು ಓಲೆಕಾರ ಅವರು ಮೂರು ಬಾರಿ ಶಾಸಕರಾಗಿ, ಮೂರು ಬಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷರಾಗಿ ರಾಜ್ಯದ‌ ಜನರಿಗೆ ಉತ್ತಮ ಸೇವೆ ನೀಡಿದ್ದಾರೆ. ಅವರು ಸದಾಕಾಲವೂ ಅಭಿವೃದ್ಧಿ ಪರ ಚಿಂತನೆಯನ್ನು ಹೊಂದಿದ್ದಾರೆ. ಆದ್ದರಿಂದ ನೆಹರು ಅವರನ್ನ ಸಚಿವರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು‌‌.

ಸಿದ್ದಪ್ಪ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಓಲೆಕಾರ ಅಭಿಮಾನಿಗಳು ‌ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಓಲೆಕಾರ ಅವರಿಗೆ ಸಚಿವ ಸ್ಥಾನ ನೀಡುವಂತೆ ಘೋಷಣೆ ಕೂಗಿ‌ ಒತ್ತಾಯಿಸಿದರು. ಮತ್ತೊಂದಿಷ್ಟು ಕಾರ್ಯಕರ್ತರು ನಡು ರಸ್ತೆಯಲ್ಲಿ ಊರುಳು ಸೇವೆ ಮಾಡಿದರು. ರಸ್ತೆಯಲ್ಲಿ ಸಾಲು ಸಾಲು ಕಾರ್ಯಕರ್ತರು ಊರುಳಾಡಿ ಬಿಜೆಪಿ ಹೈ ಕಮಾಂಡ್ ಗಮನ ಸೇಳೆಯುವ ಪ್ರಯತ್ನ ಮಾಡಿದರು‌.

ಪ್ರತಿಭಟನೆಯಲ್ಲಿ ಪ್ರಮುಖವಾಗಿ ನಗರಸಭೆ ಸದಸ್ಯರು, ಮಾಜಿ ಸದಸ್ಯರು, ಬಿಜೆಪಿ ವಿವಿಧ ಮೋರ್ಚಾಗಳ ಕಾರ್ಯಕರ್ತರು, ನೆಹರು ಓಲೆಕಾರ ಅವರು ಸ್ವಂತ ಊರಾದ ಶಿಡೇನೂರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿ ಓಲೆಕಾರ ಅವರಿಗೆ ಸಚಿವ ಸ್ಥಾನ ನೀಡುವಂತೆ ಪಟ್ಟು ಹಿಡಿದರು.

ಪ್ರತಿಭಟನೆಯಿಂದ ನಗರದಲ್ಲಿ ಸಂಚಾರಕ್ಕೆ ವ್ಯತಯವಾಗಿತ್ತು. ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಬಿಸಿ ಜನರಿಗೆ ತಟ್ಟಿತು‌.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!