Sat. Jan 22nd, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ 2021 ಪರಿಷ್ಕೃತ ವೇಳಾ ಪಟ್ಟಿ ಕುರಿತು

1 min read

ಹಾವೇರಿ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2022ನೇದ್ದಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಕ್ಷೇತ್ರದ ಮತದಾರರ ಅರ್ಹತಾ ದಿನಾಂಕ:01-11-2021ರ ಇದ್ದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಠ ಒಟ್ಟು 3 ವರ್ಷಗಳಷ್ಟು, ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ಸರ್ಕಾರದಿಂದ ನಿರ್ಧಿಷ್ಠಪಡಿಸಿದಂತ ರಾಜ್ಯದೊಳಗಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಶಿಕ್ಷಕರು ನಿಯಮಾನುಸಾರ ಹೊಸದಾಗಿ ನಮೂನೆ-19 ಮತ್ತು ಅನುಬಂಧ-2ರಲ್ಲಿ ಅರ್ಜಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು 2021 ನವೆಂಬರ್ 6 (ಶನಿವಾರ) ರವರೆಗೆ ಅರ್ಜಿಗಳನ್ನು ಸಲ್ಲಿಸಿದ್ದು ಇರುತ್ತದೆ.
ಭಾರತ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದ್ದು ಅದರಂರೆ ಕರಡು ಮತದಾರರ ಪಟ್ಟಿ ಮ್ಯಾನುಸ್ಕ್ರಿಪ್ಟ್ ತಯಾರಿಕೆ ಮತ್ತು ಕರಡು ಮತದಾರರ ಪಟ್ಟಿಯನ್ನು ದಿನಾಂಕ:02-12-2021 (ಗುರುವಾರ) ರಂದು ಮುದ್ರಿಸಲಾಗುವುದು. ಜಿಲ್ಲೆಯ್ಯಾದ್ಯಂತ ಸಂಬಂಧಿಸಿದ ಮತಗಟ್ಟೆಗಳಲ್ಲಿ ದಿನಾಂಕ:06-12-2021 (ಸೋಮವಾರ) ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅರ್ಹ ಶಿಕ್ಷಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ದಿನಾಂಕ:06-12-2021 (ಸೋಮವಾರ) ರಿಂದ 27-12-2021 (ಸೋಮವಾರ) ರವರೆಗೆ ಸ್ವೀಕರಿಸಲಾಗುವುದು. ಅರ್ಹ ಪ್ರತಿಯೊಬ್ಬ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಮತದಾರರ ನೋಂದಣಿ ನಿಯಮಗಳ ಪ್ರಕಾರ ಅರ್ಜಿ ನಮೂನೆ-19ನ್ನು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಹಾವೇರಿ ಜಿಲ್ಲೆಯಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ, ತಹಶೀಲ್ದಾರರ ಅಥವಾ ತಹಶೀಲ್ದಾರರ ಕಛೇರಿಗಳಲ್ಲಿ ನಿಯೋಜಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ಕಾಲೋಚಿತಗೊಳಿಸಿ ಪುರವಣಿ ಪಟ್ಟಿಯನ್ನು ದಿನಾಂಕ:12-01-2022 (ಬುದವಾರ) ರಂದು ತಯಾರಿಸಲಾಗುವುದು ಮತ್ತು ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ:17-01-2022 (ಸೋಮವಾರ) ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳು ಎಸ್.ಬಿ,ಶೆಟ್ಟೆಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!