Wed. Apr 13th, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

1 min read

ಹಾವೇರಿ : ಕರ್ನಾಟಕ ಸರ್ಕಾರ ಇ-ಆಡಳಿತ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ 2021-22 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ.
ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “ಹಿಂಗಾರು ರೈತರ ಬೆಳೆ ಸಮೀಕ್ಷೆ 2021-22” ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‍ಲೋಡ್ ಮಾಡಬಹುದಾಗಿರುತ್ತದೆ. ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಖಖಿಅಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  •  
  •  
  •  
  •  
  •  
  •  

Leave a Reply

Your email address will not be published.

Copyright © All rights reserved. | Developed by EXPOLOG TECHNOLOGIES
error: Content is protected !!