Tue. Feb 1st, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಬಜೆಟ್‍ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್‍ಎಫ್‍ಐ ಪ್ರತಿಭಟನೆ:

1 min read

ಹಾವೇರಿ: ರಾಜ್ಯ ಸರಕಾರ ಮಂಡಿಸಲಿರುವ ಬಜೆಟ್‍ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷÀನ್ ಎಸ್‍ಎಫ್‍ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡಸಲಾಯಿತು.


ಮಂಗಳವಾರ ಹಾವೇರಿಯ ಗಾಂಧಿಪುರದ ಸರ್ಕಾರಿ ಪದವಿ ಕಾಲೇಜ್ ಮುಂದೆ ಎಸ್ ಎಫ್ ಐ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಕಾಲೇಜಿನ ಪ್ರಾಂಶುಪಾಲರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಎಸ್‍ಎಫ್‍ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಾರ್ಚ್ -05 ರಂದು ಮಂಡನೆಯಾಗಲಿರುವ ಬಜೆಟ್‍ನಲ್ಲಿ 2019-20 ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಬೇಕು. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಮೊದಲ ವರ್ಷದ ಪದವಿಗೆ ದಾಖಲಾತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ವಿದ್ಯಾರ್ಥಿ ಸ್ನೇಹಿ ಯೋಜನೆಯನ್ನು ಮಾನ್ಯ ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದಾಗ 2016-17 ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತಂದರು.


ಇದು ಒಂದು ವರ್ಷ ಮಾತ್ರ ಜಾರಿಯಾಯಿತು ಆದರೆ ನಂತರ 2017-18 ಮತ್ತು 2018-19 ಶೈಕ್ಷಣಿಕ ವರ್ಷದಲ್ಲಿ ಮೊದಲ ವರ್ಷದ ಪದವಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ರಾಜ್ಯ ಸರ್ಕಾರ ನೀಡಿಲ್ಲ. ಇದೀಗ ಮತ್ತೆ 2019-20 ಸಾಲಿನ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಈ ಉಚಿತ ಲ್ಯಾಪ್ ಟಾಪ್ ಯೋಜನೆಯಿಂದ ವಂಚನೆಯಾಗಿರುವ ದ್ವೀತಿಯ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್‍ನ್ನು ಯಾವುದೇ ಷರತ್ತು ಹಾಕದೇ ಈ ಬಜೆಟ್ ನಲ್ಲಿ ಘೋಷಿಸಬೇಕು.


ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಕೇರಳ, ತಮಿಳುನಾಡು ಮಾದರಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಕಳೆದ 3 ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳು ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದರು ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಬದಲು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು 12% ಹೆಚ್ಚಳ ಮಾಡಿರೋದು ಖಂಡನೀಯ. ಈ ಕೂಡಲೇ ರಾಜ್ಯ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು.


ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಯನ್ನು ಕನಿಷ್ಠ 3500/ರೂ ಗಳಿಗೆ ಹೆಚ್ಚಿಸಬೇಕು. ಮೂಲ ಸೌಲಭ್ಯಗಳನ್ನು ಒದಗಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% ಹಣ ಮೀಸಲಿಡಬೇಕು. ಸರ್ಕಾರಿ ಶಾಲಾ ಕಾಲೇಜು ಹಾಸ್ಟೆಲ್, ವಿಶ್ವ ವಿದ್ಯಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ್ಠ 30% ಹಣವನ್ನು ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು.

ಈ ಎಲ್ಲ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್‍ಎಫ್‍ಐ ಮಾರ್ಚ್-03-2020 ರಂದು ರಾಜ್ಯಾದ್ಯಂತ ಹೋರಾಟ ಮಾಡಲಾಗಿದೆ ಅದೇರೀತಿ ಹಾವೇರಿ ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಮಾಡಲಾಯಿತು. ಈ ಬೇಡಿಕೆಗಳ ಈಡೇರಿಕೆಗಾಗಿ ಎಲ್ಲ ಶಾಸಕರು ವಿಧಾನ ಸಭಾ ಬಜೆಟ್ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದೂ ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಎಸ್‍ಎಫ್‍ಐ ಮುಖಂಡರಾದ ಕೃಷ್ಣ ಕಡಕೋಳ, ಪ್ರಸನ್ನ ಈಳಿಗೇರ್, ಹರೀಶ್ ಅಳವಂಡಿ, ಸಚಿನ್, ಬಸವರಾಜ ಬೆಳ್ಳಿ, ಶಿವರಾಜ್ ರಿತ್ತಿ ಗುಣಿಗೇರ್, ಕಾವ್ಯ ಕಾಲಿಗೌಡರ, ಮಮತಾ ಸವಿತಾ ಲಮಾಣಿ, ಪೂಜಾ ಕೆ.ಆರ್, ಕೀರ್ತನ ಜಿ ಬಿ,ಲಾವಣ್ಯ ಬಿ ಬಿ, ದೀಪಾ ಲಮಾಣಿ, ಸಂಗೀತಾ ಕೆ ಎಚ್, ಶರಣ ಕಾಯಕದ, ಮೈಲಾರಪ್ಪ ರಿತ್ತಿ, ರುದ್ರುಮುನಿಸ್ವಾಮಿ ಹಿರೇಮಠ, ಬಸವರಾಜ ಬಾಣದ, ಸೇರಿದಂತೆ ಮುಂತಾದವರು ಹಾಜರಿದ್ದರು.

  •  
  •  
  •  
  •  
  •  
  •  

6 thoughts on “ಬಜೆಟ್‍ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್‍ಎಫ್‍ಐ ಪ್ರತಿಭಟನೆ:

Leave a Reply

Your email address will not be published.

Copyright © All rights reserved. | Developed by EXPOLOG TECHNOLOGIES
error: Content is protected !!