Sat. Jul 4th, 2020

ಪಾಂಡವ ನ್ಯೂಸ್

ಸಮಾಜದ ಧ್ವನಿ

ಈರುಳ್ಳಿ ಬೆಲೆ ಕುಸಿತ-ಪ್ರತಿ ಕೆಜಿಗೆ ರೂ.30ಕ್ಕೆ

ನವದೆಹಲಿ: ಬೆಲೆ ಏರಿಕೆ ನಿಯಂತ್ರಣಕ್ಕೆ ತರುವ ಸಲುವಾಗಿ ಕೇಂದ್ರ ಸರ್ಕಾರ ರಫ್ತು ನಿಷೇಧಿದ ಪರಿಣಾಮ ಈರುಳ್ಳಿ ದರ ಗುರುವಾರ ಕುಸಿತ ಕಂಡಿದೆ.

ಏಷ್ಯಾದ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಸಲ್ಗಾಂವ್ ನಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ರೂ.30ಕ್ಕೆ ಇಳಿಕೆಯಾಗಿದೆ.

ಸೆಪ್ಟೆಂಬರ್ ವರೆಗೂ ಪ್ರತಿ ಕೆಜಿ ಈರುಳ್ಳಿಯ ಬೆಲೆ ರೂ.51 ಇತ್ತು. ಇದೀಗ ಈರುಳ್ಳಿ ಬೆಲೆಯಲ್ಲಿ ಕುಸಿತ ಕಂಡು ಬಂದ ಹಿನ್ನಲೆಯಲ್ಲಿ ಗ್ರಾಹಕರ ಮುಖದಲ್ಲಿ ಸಂತಸ ಕಂಡು ಬಂದಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇತ್ತೀಚೆಗೆ ಎದುರಾದ ಪ್ರವಾಹ ಪರಿಸ್ಥಿತಿಯಿಂದಾಗಿ ಈರುಳ್ಳಿ ಪೂರೈಕೆಯಲ್ಲಿ ಅಡಚಣೆಯುಂಟಾಗಿತ್ತು. ಆಗಸ್ಟ್ ತಿಂಗಳಿನಿಂದಲೂ ಈರುಳಅಳಿ ದರದಲ್ಲಿ ಭಾರಿ ಏರಿಕೆ ಕಂಡು ಬಂದಿತ್ತು. ಕೆಲವೆಡೆ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಂಡಿದ್ದರಿಂದ ಬೆಲೆ ಹೆಚ್ಚಳವಾಗಿದೆ ಎಂದೂ ಕೂಡ ಹೇಳಲಾಗಿತ್ತು.

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಳೆದ ಭಾನುವಾರ ಈರುಳ್ಳಿ ರಫ್ತು ನಿಷೇಧಿಸಿತ್ತು. ಜೊತೆಗೆ ಮಿತಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!