Sat. Mar 12th, 2022

ಪಾಂಡವ ನ್ಯೂಸ್

ಸಮಾಜದ ಧ್ವನಿ

ಡಿಸೆಂಬರ್ ಮಾಹೆ ಆಹಾರ ಧಾನ್ಯ ಹಂಚಿಕೆ

1 min read

ಹಾವೇರಿ : ಆಹಾರ ಭದ್ರತಾ ಯೋಜನೆಯಡಿ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಡಿಸೆಂಬರ್-2021 ಮಾಹೆಯಲ್ಲಿ ಜಿಲ್ಲೆಯ ಫಲಾನುಭವಿಗಳಿಗೆ ಪಡಿತರ ವಿತರಣೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 35 ಕೆ.ಜಿ.ಅಕ್ಕಿ (ಎನ್‍ಎಫ್.ಎಸ್..ಎ.ಯೋಜನೆ) ಅಡಿ) ಮತ್ತು ಪಿಎಂಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ವಿತರಿಸಲಾಗುವುದು.
ಪಿ.ಎಚ್.ಎಚ್. (ಬಿಪಿಎಲ್ ) ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ ಉಚಿತವಾಗಿ 5 ಕೆ.ಜಿ.ಅಕ್ಕಿ (ಎನ್‍ಎಫ್‍ಎಸ್‍ಎ ಯೋಜನೆಯಡಿ) ಮತ್ತು ಪಿಎಂಜಿಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ ಎರಡು ಕೆ.ಜಿ.ಗೋಧಿ ಉಚಿತವಾಗಿ ವಿತರಣೆ ಮಾಡಲಾಗುವುದು.
ಎನ್.ಪಿ.ಎಚ್.(ಎಪಿಎಲ್) ಪಡಿತರ ಚೀಟಿ ಹೊಂದಿ ಒಪ್ಪಿಗೆ ನೀಡಿದ ಏಕ ಸದಸ್ಯರಿಗೆ 5 ಕೆ.ಜಿ. , ಎರಡು ಮತ್ತು ಎರಡಕ್ಕಿಂತ ಹೆಚ್ಚಿನ ಸದಸ್ಯರಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆ.ಜಿಗೆ ರೂ.15ರಂತೆ ವಿತರಿಸಲಾಗುವುದು.
ಅಂತರ್ ರಾಜ್ಯ/ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಸ್ತುಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಪ್ರಸಕ್ತ ಡಿಸೆಂಬರ್-2021ರ ಮಾಹೆಯಲ್ಲಿ ನ್ಯಾಯಬೆಲೆ ಅಂಗಡಿಕಾರರು, ಸರ್ಕಾರ ನಿಗಧಿಪಡಿಸಿದ ಸಮಯದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆದು ಪಡಿತರ ವಸ್ತುಗಳನ್ನು ವಿತರಿಸುತ್ತಾರೆ. ಪಡಿತರ ಪಡೆಯಲು ಬರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರದಲ್ಲಿ ನಿಂತು ಪಡಿತರ ವಸ್ತುಗಳನ್ನು ಪಡೆದುಕೊಳ್ಳಲು ಕೋರಲಾಗಿದೆ.

  •  
  •  
  •  
  •  
  •  
  •  

Leave a Reply

Your email address will not be published.

Copyright © All rights reserved. | Developed by EXPOLOG TECHNOLOGIES
error: Content is protected !!